ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮ ಜರಗಿತು.
ಮಂಗಳೂರು ವಿಶ್ವವಿದ್ಯಾಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಪುತ್ತೂರು ಅಕ್ಷಯ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಟಿಪಳ್ಳ ಶ್ರೀ ನಾರಾಯಣಗುರು ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗುಣವತಿ ರಮೇಶ್ ಅವರು ನಾರಾಯಣಗುರುಗಳ ಸಾಮಾಜಿಕ ಸುಧಾರಣೆ ಹಾಗೂ ಅವರ ಚಿಂತನೆಗಳ ಬಗ್ಗೆ ಉಪನ್ಯಾಸ ನೀಡಿದರು. ನಾರಾಯಣಗುರು ಅಧ್ಯಯನ ಪೀಠದ ಸಂಯೋಜಕ ಡಾ. ಗಣೇಶ್ ಅಮೀನ್ ಸಂಕಮಾರ್ ಅವರು, ನಾರಾಯಣಗುರುಗಳ ತತ್ವದ ಮಹತ್ವವನ್ನು ತಿಳಿಸಿದರು.
ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಅಧ್ಯಕ್ಷತೆ ವಹಿಸಿದ್ದರು. ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಸದಸ್ಯ ಭೋಜ ಅಂಚನ್ ಮಧ್ಯ, ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ, ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಗನ್ ದೀಪ್ ಎ.ಬಿ. ಉಪಸ್ಥಿತರಿದ್ದರು. ಗ್ರಂಥಾಪಾಲಕಿ ಪ್ರಭಾವತಿ ಸ್ವಾಗತಿಸಿ, ಉಪನ್ಯಾಸಕಿ ರಶ್ಮಿ ಕೆ. ವಂದಿಸಿದರು. ಉಪನ್ಯಾಸಕಿ ಆಶಿಕಾ ಫರ್ಝಾನ ಕೆ.ಎ. ಕಾರ್ಯಕ್ರಮ ನಿರೂಪಿಸಿದರು.