ಪುತ್ತೂರು: ಆರ್ಯಾಪು ಗ್ರಾಮದ ವಾರ್ಡ್ ಸಂಖ್ಯೆ ೪ಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಯತೀಶ ಡಿ.ಬಿ. ಅವರು ಕಣಕ್ಕಿಳಿದಿದ್ದು, ವಾರ್ಡ್ ವ್ಯಾಪ್ತಿಯಲ್ಲಿ ಮತ ಯಾಚನೆಯ ಕಾರ್ಯ ನಡೆಸಿದರು. ತನ್ನ ಚುನಾವಣಾ ಗುರುತಾದ ಟೇಬಲ್ ಚಿಹ್ನೆಗೆ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡರು.
ಜನರ ಬಳಿ ಮತಯಾಚನೆ ಮಾಡುತ್ತಾ ಮಾತನಾಡಿದ ಯತೀಶ ಡಿ.ಬಿ. ಅವರು, ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ತಾನು, ಇದೀಗ ಸಂಟ್ಯಾರ್‌ನಲ್ಲಿ ವಾಸವಾಗಿದ್ದೇನೆ. ಕಾರ್ಪೊರೇಟ್ ಜಗತ್ತಿನ ಜೊತೆಗೆ ಗ್ರಾಮೀಣ ಭಾಗದ ಆಗುಹೋಗುಗಳನ್ನು ಅರಿತುಕೊಂಡಿರುವುದರಿಂದ, ಜನರ ಬೇಡಿಕೆಗಳನ್ನು ಸುಲಭವಾಗಿ ಈಡೇರಿಸಲು ತನ್ನಿಂದ ಸಾಧ್ಯ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ನಿಲ್ಲುತ್ತಿದ್ದು, ವಾರ್ಡ್‌ನ ಬೇಡಿಕೆಗಳನ್ನು ಪೂರೈಸುವಲ್ಲಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಇತ್ತೀಚೆಗೆ ಅಂಗನವಾಡಿ ಕಾರ್ಯಕರ್ತೆ ಶಾಂತಿ ಮಂಜುನಾಥ ಅವರ ನಿವೃತ್ತಿಯ ಬಗ್ಗೆ ನಡೆದ ಸಾರ್ವಜನಿಕ ಅಭಿನಂದನಾ ಸಭೆಯ ಅಧ್ಯಕ್ಷನಾಗಿ, ಜಿಲ್ಲೆಯಲ್ಲೇ ಮಾದರಿಯಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿರುತ್ತೇನೆ. ಇದೀಗ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಸದಸ್ಯನಾಗಿದ್ದು, ಸಂಟ್ಯಾರು ಶ್ರೀ ವಿನಾಯಕ ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯೂ ಆಗಿರುತ್ತೇನೆ. ಬೆಂಗಳೂರಿನ ತುಳುವೆರೆ ಚಾವಡಿಯ ಸಕ್ರೀಯ ಕಾರ್ಯಕರ್ತನಾಗಿದ್ದು, ವಿವಿಧ ಸಂಘ-ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಧಾರ್ಮಿಕ, ಸಾರ್ವಜನಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯವಾಗಿ ಕೆಲಸ ಮಾಡಿದ ಅನುಭವವಿದ್ದು, ಗ್ರಾಮ ಪಂಚಾಯತ್ ಸದಸ್ಯನಾಗಿ ಆಯ್ಕೆಯಾದರೆ ವಾರ್ಡ್‌ನ ಮಾತ್ರವಲ್ಲ ಆರ್ಯಾಪು ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಇದೇ ಸಂದರ್ಭ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಜಿ.ಪಂ. ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾ.ಪಂ. ಮಾಜಿ ಸದಸ್ಯರಾದ ಹರೀಶ್ ಬಿಜತ್ರೆ, ಮೀನಾಕ್ಷಿ ಮಂಜುನಾಥ್, ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯರಾಮ ಪೂಜಾರಿ, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಹರೀಶ್ ನಾಯಕ್ ಬಳಕ್ಕ ಮೊದಲಾದವರು ಪ್ರಚಾರದಲ್ಲಿ ಭಾಗಿಯಾದರು.