ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸೇನಾ ವಾಹನ 300 ಅಡಿ ಆಳದ ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ.
18 ಯೋಧರು ವಾಹನದಲ್ಲಿದ್ದರು ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಸೇನಾ ವಾಹನವು ಜಿಲ್ಲೆಯ ಬನೋಯ್ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
11 ಮರಾಠಾ ಲೈಟ್ ಇನ್ಫೆಂಟ್ರಿಯ ಸೇನಾ ವಾಹನ ಇದು ಎಂದು ಪೊಲೀಸರು ತಿಳಿಸಿದ್ದಾರೆ. ಆ ವಾಹನವು ಸುಮಾರು 300 ಅಡಿ ಆಳದ ಕಮರಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 12 ಸೈನಿಕರಿಗೆ ಗಂಭೀರ ಗಾಯಗಳಾಗಿವೆ. ಸೇನಾ ವಾಹನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿಯ ಪೋಸ್ಟ್ಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ ಯೋಧರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.