ದೆಹಲಿ : ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ನಿಧನರಾದರು.
ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ನಲ್ಲಿ, ದಾಖಲಿಸಲಾಗಿತ್ತು.
ಮನಮೋಹನ್ ಸಿಂಗ್ ಅವರು 2004 ರಿಂದ 2014 ರ ವರೆಗೆ ಭಾರತದ ಪ್ರಧಾನಿಯಾಗಿದ್ದರು. ಈ ಹಿಂದೆ ಕೋವಿಡ್ ಗೂ ಒಳಗಾಗಿದ್ದ ಸಿಂಗ್ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಕ ಎಂದೇ ಸಿಂಗ್ ಹೆಸರು ಪಡೆದಿದ್ದರು