ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಅನ್ನಸಂತರ್ಪಣೆಗಾಗಿ ಬೃಹತ್ ಹೊರೆಕಾಣಿಕೆ ಮೆರವಣಿಗೆ ಶುಕ್ರವಾರ ಸಂಜೆ ದರ್ಬೆ ವೃತ್ತದಿಂದ ದೇವರಮಾರು ಗದ್ದೆ ತನಕ ನಡೆಯಿತು.
ದರ್ಬೆ ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಬಳಿಕ ನಗರದ ವರ್ತಕರಿಂದ ಹೊರೆಕಾಣಿಕೆಗೆ ಬೇಕಾದ ಸಾಹಿತ್ಯಗಳನ್ನು ಪಡೆದುಕೊಂಡು ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ಬಂದು ದೇವರಮಾರು ಗದ್ದೆಯಲ್ಲಿ ಸಮಾಪನಗೊಂಡಿತು.
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಶಶಾಂಕ ಜೆ.ಕೊಟೇಚಾ, ಡಾ.ಸುರೇಶ್‍ಪುತ್ತೂರಾಯ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸ್ವಾಗತ ಸಮಿತಿ ಅಧ್ಯಕ್ಸರಾದ ರಾಜು ಶೆಟ್ಟಿ ಸಂಚಾಲಕರಾದ ಅನಿಲ್ ತೆಂಕಿಲ, ಗಣೇಶ್ ಮಕರಂದ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಹೊರೆಕಾಣಿಕೆ ಸಮರ್ಪಣೆಯಾದ ಬಳಿಕ ಉಗ್ರಾಣ ಮುಹೂರ್ತ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ವಿಶ್ವನಾಥ್ ನಾಯ್ಕ್ , ದೇವಣ್ಣ ಕಿಣಿ ಸಂಸ್ಥೆಯ ವಿಜಯಣ್ಣ, ಗುರುರಾಜ್ ತಂತ್ರಿ ದೀಪ ಬೆಳಗಿಸಿದರು.