ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆನ್ನಲಾಗಿದ್ದು, ಅಣ್ಣು ನಾಯ್ಕ, ರಮೇಶ್ ನಾಯ್ಕ್ ಹಾಗೂ ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ.
ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟವರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.