ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಉರಿ ಬೌಲಿಂಗ್‌ : 147 ವರ್ಷದ ಟೆಸ್ಟ್‌ ದಾಖಲೆ ಪತನ

20ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್

ಮೆಲ್ಬೋರ್ನ್‌: ಇಲ್ಲಿನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್​ ಪೇರಿಸಿದೆ. ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4 ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ ಬುಮ್ರಾ ಟೆಸ್ಟ್​ ಕ್ರಿಕೆಟ್​ನಲ್ಲಿ 200 ವಿಕೆಟ್​​ಗಳನ್ನು ಪೂರೈಸಿದ್ದಾರೆ.
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯುತ್ತಮ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 8494 ಎಸೆತಗಳನ್ನು ಎಸೆದಿದ್ದು, ಒಟ್ಟು 202 ವಿಕೆಟ್ ಕಬಳಿಸಿದ್ದಾರೆ. ಅದು ಕೂಡ ಕೇವಲ 19.38 ರನ್ ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ 20ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೊಸ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಜೋಯಲ್ ಗಾರ್ನರ್ 20.34 ರ ಸರಾಸರಿಯಲ್ಲಿ 200 ವಿಕೆಟ್ ಕಬಳಿಸಿದ್ದು ಟೆಸ್ಟ್​ನಲ್ಲಿ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿರುವುದು ವಿಶೇಷ.
ಟೆಸ್ಟ್ ಕ್ರಿಕೆಟ್​ನಲ್ಲಿ 85 ಇನಿಂಗ್ಸ್​​ಗಳಲ್ಲಿ 1415 ಓವರ್​ಗಳನ್ನು ಎಸೆದಿರುವ ಜಸ್​ಪ್ರೀತ್ ಬುಮ್ರಾ ಒಟ್ಟು 202 ವಿಕೆಟ್ ಕಬಳಿಸಿದ್ದು, ಈ ಮೂಲಕ 200+ ವಿಕೆಟ್ ಪಡೆದ ಭಾರತದ 12ನೇ ಬೌಲರ್​​ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 82ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top