ಸಮುದ್ರದ ನೀರಿನಲ್ಲಿ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋದ ಪುತ್ತೂರಿನ ವ್ಯಕ್ತಿ ಮೃತ್ಯು !

ಪುತ್ತೂರು : ಸಮುದ್ರದ ನೀರಿನಿಂದ ಸಹೋದರನ ಪುತ್ರಿಯನ್ನು ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಭಾನುವಾರ ನಡೆದಿದೆ.

ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್‌ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿ ಘಟನೆ ಸಂಭವಿಸಿದೆ. ನೀರಿನಲ್ಲಿ ಮುಳುಗಿ ವಾಪಸ್‌ ದಡಕ್ಕೆ ಬಂದವರನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದವರು, ಪಡೀಲ್ ನಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ 11 ಮಂದಿ ಕುಟುಂಬಿಕರು ಸೋಮೇಶ್ವರ ಸಮುದ್ರ ತೀರದಲ್ಲಿ ವಿಹಾರಕ್ಕೆಂದು ಆಗಮಿಸಿದ್ದರು. 2015ರಲ್ಲಿ ಪುತ್ತೂರು ನಿವಾಸಿ ಆಲಿಮಾ ರಶೀದಾ ಎಂಬವರನ್ನು ವಿವಾಹವಾಗಿದ್ದರು. ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರಿನ ಬನ್ನೂರು ಬಾಡಿಗೆ ಫ್ಲ್ಯಾಟ್ ನಲ್ಲಿ ನೆಲೆಸಿದ್ದರು. ಮೃತರು ತಾಯಿ, ಪತ್ನಿ ಹಾಗೂ ಮಕ್ಕಳನ್ನು ಅಗಲದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top