ಪುತ್ತೂರು : ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು , ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಸಹ ಸಂಸ್ಥೆಗಳ ಸಹಯೋಗದೊಂದಿಗೆ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವ- ಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ ಹಾಗೂ ದಶಸಂಭ್ರಮ ಜ.4 ರಂದು ಒಕ್ಕಲಿಗ ಗೌಡ ಸಮುದಾಯ ಭವನ ಒಕ್ಕಲಿಗನಗರ ತೆಂಕಿಲದಲ್ಲಿ ನಡೆಯಲಿದೆ ಎಂದು ದಶಮಾನೋತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಹೇಳಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಪೀಠಾಧ್ಯಕ್ಷ ಪರಮ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ ನಡೆಯಲಿದೆ. ಮಂಗಳೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಪರಮಪೂಜ್ಯ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿರುವರು. ಮಾಜಿ ಶಾಸಕ ಹಾಗೂ ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಬೆಂಗಳೂರಿನ ಅಖಿಲ ಕರ್ನಾಟಕ ಮಹಿಳಾ ಒಕ್ಕಲಿಗರ ಘಟಕದ ರಾಜ್ಯಾಧ್ಯಕ್ಷೆ ಡಾ| ಶಾಂತ ಸುರೇಂದ್ರ ಗೌಡ, ಯುವ ಜಾತ್ಯಾತೀತ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ, ಸೋಮವಾರ ಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಮಂಥರ್ ಗೌಡ, ಬೆಂಗಳೂರು ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಡಬ ಒಕ್ಕಲಿಗ ಸೇವಾ ಸಂಘ ಅಧ್ಯಕ್ಷ ಸುರೇಶ್ ಬೈಲು, ಬೆಳ್ತಂಗಡಿ ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ತಾಲೂಕು ಒಕ್ಕಲಿಗ ಯಾನೆ ಗೌಡರ ಸಂಘದ ಅಧ್ಯಕ್ಷ ಲೋಕಯ್ಯ ಗೌಡ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ಗೌಡ, ಬಂಟ್ವಾಳ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಇರಂದೂರು ಉಪಸ್ಥಿತರಿರುವರು.
ಬೆಳಗ್ಗೆ 6 ಗಂಟೆಗೆ ಗಣಪತಿ ಹವನ, ಮಧ್ಯಾಹ್ನ 8 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ , ಸಂಜೆ 8:30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಂತರ ಬೆಳಗ್ಗೆ 9:30ಕ್ಕೆ ಒಕ್ಕಲಿಗ ಸ್ವ- ಸಹಾಯ ಟ್ರಸ್ಟ್ ನ ಸಭಾಭವನದ ಉದ್ಘಾಟನೆಯಾಗಲಿದೆ. ಬಳಿಕ ಸಮಯ 10 ರಿಂದ ಸಭಾಕಾರ್ಯಕ್ರಮ ನಡೆಯಲಿದೆ. ಮದ್ಯಾಹ್ನ ಗಂಟೆ 1 ರಿಂದ 2: 15 ರವರೆಗೆ ಯಕ್ಷಗಾನ – ರಾಣಿ ಶಶಿಪ್ರಭೆ ಜರುಗಲಿದೆ.
ವಿಶೇಷ ಆಕರ್ಷಣೆ :
ಖ್ಯಾತ ಚಲನಚಿತ್ರ ನಟ ನಟಿಯರ ತಾರ ಮೆರುಗುಗೊಳ್ಳಲಿದೆ. ಬಳಿಕ ಅತ್ಯುತ್ತಮ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಸ,ಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ, ಕಾರ್ಯದರ್ಶಿ ದಿವ್ಯಪ್ರಸಾದ್ ಗೌಡ, ದಶಮಾನೋತ್ಸವ ಕಾರ್ಯದರ್ಶಿ ಹೂವಪ್ಪ ಗೌಡ ಪರ್ಪುಂಜ, ಒಕ್ಕಲಿಗ ವಿವಾಹ ವೇದಿಕೆ ಸಂಯೋಜಕ ಸುರೇಶ್ ಗೌಡ ಕಲ್ಲಾರೆ ಉಪಸ್ಥಿತರಿದ್ದರು.