ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟ : ಸಾವಿನ ಸಂಖ್ಯೆ 8ಕ್ಕೇರಿಕೆ

ಹುಬ್ಬಳ್ಳಿ: ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟಿಸಿ ಗಂಭೀರವಾಗಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ವ್ರತಧಾರಿಗಳ ಪೈಕಿ ಇನ್ನಿಬ್ಬರು ಕೊನೆಯುಸಿರೆಳೆಯುವುದರೊಂದಿಗೆ ಸಾವಿನ ಸಂಖ್ಯೆ 8ಕ್ಕೇರಿದೆ. ಈ ಅವಘಡದಲ್ಲಿ ಈಗ ಒಬ್ಬ ಗಾಯಾಳು ಮಾತ್ರ ಬಾಕಿ ಉಳಿದಿದ್ದು, ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಳಗಳು ತಿಳಿಸಿವೆ.

ಪ್ರಕಾಶ ಬಾರಕೇರ (42) ಎಂಬವರು ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ತೇಜಸ್ವರ್ (27)​​ ಎಂಬವರು ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ವ್ರತಧಾರಿಗಳ ಸಾವಾಗಿದ್ದು, ಕಿಮ್ಸ್​​ನಲ್ಲಿ ಓರ್ವ ಗಾಯಾಳು ವ್ರತಧಾರಿಗೆ ಚಿಕಿತ್ಸೆ ಮುಂದುವರಿದಿದೆ.

ಹುಬ್ಬಳ್ಳಿಯ ಉಣಕಲ್‌ನ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ವ್ರತಧಾರಿಗಳು ತೀವ್ರ ಸುಟ್ಟ ಗಾಯಗಳಾಗಿ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದರೂ ಗಾಯಗೊಂಡವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.































 
 

ಡಿಸೆಂಬರ್ 22ರಂದು ತಡರಾತ್ರಿ ವೇಳೆ ದೇವಸ್ಥಾನದಲ್ಲಿದ್ದ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾದಾಗ ಉರಿಯುತ್ತಿದ್ದ ದೀಪದ ಬೆಂಕಿ ಹತ್ತಿಕೊಂಡು ಸಿಲಿಂಡರ್‌ ಸ್ಫೋಟಿಸಿತ್ತು. ದೇವಸ್ಥಾನದಲ್ಲಿ ಮಲಗಿದ್ದ 9 ಅಯ್ಯಪ್ಪ ವ್ರತಧಾರಿಗಳು ತೀವ್ರ ಸುಟ್ಟಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top