ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ

ಪುತ್ತೂರು : ಕರ್ನಾಟಕ ರಾಜ್ಯ ಸರಕಾರಿ  ನೌಕರರ ವೇತನ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜ್ಯಾರಿಗೊಳಿಸಲು ಸರಕಾರವನ್ನು ಒತ್ತಾಯಿಸಿ ರಾಜ್ಯಾದ್ಯಮತ ಮಾ.1 ರಿಂದ ಸರಕಾರಿ ನೌಕರರು ನಡೆಸುವ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನಲ್ಲೂ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಶಿವಾನಂದ ಆಚಾರ್ಯ ತಿಳಿಸಿದ್ದಾರೆ.

ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 2023-24ನೇ ಸಾಲಿನ ಬಜೆಟ್‍ ಮಂಡನೆ ವೇಳೆ ಸರಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆ ಕುರಿತು ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಿಗೆ ನಿರಾಶೆ ಮೂಡಿಸಿದೆ. ಈ ನಿಟ್ಟಿನಲ್ಲಿ ಸುಮಾರು 8000 ಚುನಾಯಿತ ಪ್ರತಿನಿಧಿಗಳ ಸಮ್ಮಿಖದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಮುಷ್ಕರ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರದ ಅಧಿಕಾರಿ, ನೌಕರರು ಹಾಗೂ ಸರಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ ಹಕ್ಕು. ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೌಕರರ ವೇತನ ಪರಿಷ್ಕರಣೆ ಸರಕಾರ ಜವಾಬ್ದಾರಿಯಾಗಿದ್ದು, ನಿರ್ಲ್ಯಕ್ಷ ವಹಿಸಿರುವುದರಿಂದ ಬೇಡಿಕೆಗಳ ಈಡೇರಿಕೆಗಾಗಿ ಸರಕಾರವನ್ನು ಒತ್ತಾಯಿಸಿ ತಾಲೂಕಿನ ಎಲ್ಲಾ ಸರಕಾರಿ ಇಲಾಖೆಯ ಎಲ್ಲಾ ಎ ಯಿಂದ ತೊಡಗಿ ಡಿ ದರ್ಜೆಯ ನೌಕರರು ಕರ್ತವ್ಯಕ್ಕೆ ಹಾಜರಾಗುವ ಮೂಲಕ ಶಾಂತಿಯುತವಾಗಿ ಮುಷ್ಕರ ನಡೆಸುವುದು. ಯಾವುದೇ, ಯಾರ ವಿರುದ್ಧವೂ ಪ್ರತಿಭಟನೆ ಇಲ್ಲ ಎಂದು ಅವರು ಹೇಳಿದರು.



































 
 

ಕಳೆದ 2018 ರಲ್ಲಿ ವೇತನ ಪರಿಷ್ಕರಣೆಗೊಂಡಿದೆ. ಇದೀಗ ವೇತನ ಪರಿಷ್ಕರಣೆಗೊಳ್ಳದೆ ಐರು ವರ್ಷಗಳಾಗಿವೆ. ಅಲ್ಲದೆ ಎನ್‍ಪಿಎಸ್ ಗೆ ಒಳಪಡುವ ನೌರರಿಗೆ ಸಮಸ್ಯೆ ಉಂಟಾಗಿದೆ. ತಕ್ಷಣ ಎನ್‍ಪಿಎಸ್‍ ರದ್ದುಗೊಳಿಸಿ, ಹಿಂದಿನ ಒಪಿಎಸ್ ನ್ನು ಕರ್ನಾಟಕದಲ್ಲಿ ಮರು ಜ್ಯಾರಿಗೆ ತರಬೇಕು, 7ನೇ ವೇತನ ಾಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಚುನಾವಣೆ ನೀತಿ ಸಂಹಿತೆ ಜ್ಯಾರಿಗೆ ಬರುವ ಮೊದಲು ಶೇ.40 ಫಿಟ್‍ಮೆಂಟ್ ಸೌಲಭ್ಯವನ್ನು ಜುಲೈ 1, 2022 ರಿಂದ ಜ್ಯಾರಿಗೆ ಬರುವಂತೆ ಸರಕಾರಿ ಆದೇಶ ಹೊರಡಿಸಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ನಡೆಸಲಾಗುವುದು. ನಮ್ಮ ಬೇಡಿಕೆ ಈಡೇರುವ ತನಕ ಮುಷ್ಕರ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ.,  ತಾಲೂಕು ಸಂಘದ ಕಾರ್ಯದರ್ಶಿ ಅಬ್ರಹಾಂ, ಉಪಾಧ್ಯಕ್ಷರಾದ ಹರಿಪ್ರಕಾಶ್‍ ಬೈಲಾಡಿ, ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top