ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ

ಹೊಸದಿಲ್ಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟರ್‌ನಲ್ಲಿ ಶೂಭಾಶಯ ತಿಳಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ ಮತ್ತು ಸುಸ್ಥಿರ ಭವಿಷ್ಯವನ್ನು ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅನಂತ ಸಂತೋಷವನ್ನು ತರಲಿ. ಪ್ರತಿಯೊಬ್ಬರೂ ಆರೋಗ್ಯ ಮತ್ತು ಸಮೃದ್ಧಿ ಲಭಿಸಲಿ ಎಂದು ತಿಳಿಸಿದ್ದಾರೆ.
2025ರ ವರ್ಷ ನಿಮ್ಮ ಪಾಲಿಗೆ ಭರವಸೆ, ಸಂತೋಷ ಮತ್ತು ಬಹಳಷ್ಟು ಯಶಸ್ಸಿನಿಂದ ಕೂಡಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಿಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ, ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು, ಈ ವರ್ಷವು ನಿಮ್ಮ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಸಂತೋಷ ತರಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top