ಉಳ್ಳಾಲ : ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಹಿನ್ನಲೆ ದ್ವಿಚಕ್ರ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ.
ಮೃತ ಅಝರ್ ಸ್ಕೂಟರ್‍ನಲ್ಲಿ ಬರುತ್ತಿದ್ದ ವೇಳೆ ಕೇರಳ ಕಡೆಗೆ ಚಲಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದರಿಂದ ರಸ್ತೆಗೆ ಎಸೆದು ಬಿದ್ದಿದರಿಂದ ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿ ಚಲಿಸಿದೆ ಎಂದು ತಿಳಿದು ಬಂದಿದೆ. ಅಝರ್ ಮೃತ ದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
























