ಉದ್ಯಮಿ ಮನೆಗೆ ದಾಳಿ ನಡೆಸಿದ ನಕಲಿ ಇಡಿ ಅಧಿಕಾರಿಗಳು | 30 ಲಕ್ಷ ರೂ. ಲೂಟಿ

ವಿಟ್ಲ: ನಕಲಿ ಇಡಿ ಅಧಿಕಾರಿಗಳು ಉದ್ಯಮಿಯೊಬ್ಬರ ಮನೆಗೆ ದಾಳಿ ನಡೆಸಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲ್ಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು’ ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ.

ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top