ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು (55) ನಿಧನ ಹೊಂದಿದರು.
ಸಂಜೀವ ಪೂಜಾರಿ ಅವರು ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಕುಕ್ಕಿನಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿ, ಮೃತ್ಯುಂಜೇಶ್ವರ ದೇವಸ್ಥಾನದ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮತ್ತು ಮೂರು ಮಕ್ಕಳನ್ನು ಅಗಲಿದ್ದಾರೆ.