ಬೆಂಗಳೂರು: ಬೆಂಗಳೂರು ಸಮೀಪ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೇರಳ ಮೂಲದ ಸುನೀಲ್ ಜೋಸೆಫ್ ಮತ್ತು ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಪೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ, ಬಾಗಿಲು ಛಿದ್ರವಾಗಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳಿಗೂ ಹಾನಿಯಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಗಾಬರಿಯಾಗಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಧ್ವಂಸಗೊಂಡಿದೆ.