ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅನೂಪ್ (38) ಮತ್ತು ರಾಖಿ(35) ಎಂಬ ದಂಪತಿ ಮಕ್ಕಳಾದ ಅನುಪ್ರಿಯಾ (5) ಮತ್ತು ಪ್ರಿಯಾಂಶ್ (2) ಅವರನ್ನು ಕೊಂದು ಬಳಿಕ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಅನೂಪ್ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸದವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.