ವಿಟ್ಲ : ನಿವೃತ್ತ ಅಧ್ಯಾಪಕ , ಪ್ರಸಿದ್ಧ ಯಕ್ಷಗಾನ ಅರ್ಥಧಾರಿ ಪಕಳಕುಂಜ ಶಾಂ ಭಟ್ (77) ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಾಂ ಭಟ್ ಅವರು ವಿಟ್ಲದ ವಿಠಲ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ನಿವೃತ್ತರಾಗಿದ್ದರು. ಯಕ್ಷಗಾನ ಅರ್ಥದಾರಿಯಾಗಿ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.