ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌

ಅರ್ಧದಾರಿಯಲ್ಲಿರುವಾಗ ಬಂದ ಫೋನ್‌ ಕಾಲ್‌ ಇಡೀ ಯೋಜನೆಯನ್ನು ಬದಲಾಯಿಸಿತು

ಬೆಂಗಳೂರು: ಇಂದು ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶಸ್ತ್ರತ್ಯಾಗ ಮಾಡಬೇಕಿದ್ದ ನಕ್ಸಲರು ಕೊನೇಕ್ಷಣದಲ್ಲಿ ಪ್ಲಾನ್‌ ಬದಲಾಯಿಸಿದ್ದಾರೆ. ಚಿಕ್ಕಮಗಳೂರು ಬದಲಾಗಿ ಬೆಂಗಳೂರಿಗೆ ಶರಣಾಗತಿ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಲಾಗಿದೆ.

ಚಿಕ್ಕಮಗಳೂರಿನಲ್ಲಿ ಶರಣಾಗತಿ ಕಾರ್ಯಕ್ರಮಕ್ಕೆ ಸಕಲ ತಯಾರಿಯನ್ನೂ ಮಾಡಲಾಗಿತ್ತು. ನಕ್ಸಲರು ಕೂಡ ಹೊರಟು ಅರ್ಧ ದಾರಿ ತಲುಪಿದ್ದರು. ಅಷ್ಟರಲ್ಲಿ ಬೆಂಗಳೂರಿನಿಂದ ಬಂದ ಕರೆಯೊಂದು ಯೋಜನೆಯನ್ನು ಬದಲಾಯಿಸಿದೆ ಎಂದು ಮೂಲವೊಂದು ತಿಳಿಸಿದೆ.































 
 

ಮುಖ್ಯಮಂತ್ರಿ ಸಿದ್ದರಾಮಯ್ಯ ನಕ್ಸಲರನ್ನು ಭೇಟಿ ಮಾಡಲು ಬಯಸಿದ್ದಾರೆ. ಅವರ ಸಮ್ಮುಖದಲ್ಲೇ ನಕ್ಸಲರು ಮುಖ್ಯವಾಹಿನಿಗೆ ಬರಲು ಇಚ್ಚಿಸಿದ್ದಾರೆ. ಹೀಗಾಗಿ ಕೊನೇಕ್ಷಣದಲ್ಲಿ ಚಿಕ್ಕಮಗಳೂರಿನ ಕಾರ್ಯಕ್ರಮವನ್ನು ರದ್ದುಮಾಡಲಾಗಿದ್ದು, ನಕ್ಸಲರಿಗೆ ಮತ್ತು ಅವರ ಪೋಷಕರಿಗೆ ಬೆಂಗಳೂರಿಗೆ ತೆರಳಲು ವಿಶೇಷ ವಾಹನದ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ.
ನರಸಿಂಹರಾಜಪುರದವರೆಗೂ ಆಗಮಿಸಿದ್ದ ನಕ್ಸಲರು ಅಲ್ಲಿಂದ ವಾಪಸಾಗಿದ್ದಾರೆ. ಇಂದು ಸಂಜೆ ಬೆಂಗಳುರಿನಲ್ಲಿ ಮುಖ್ಯಮಂತ್ರಿ ಸಮ್ಮುಖದಲ್ಲಿ ನಕ್ಸಲರು ಶಸ್ತ್ರತ್ಯಾಗ ಮಾಡಿ ಸಮಾಜದ ಮುಖ್ಯವಾಹಿನಿಯೊಂದಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಶರಣಾಗಲು ಬಯಸಿರುವ ನಕ್ಸಲ್‌ ನಾಯಕಿ ಮುಂಡಗಾರು ಲತಾವಿರುದ್ಧ ಬರೋಬ್ಬರಿ 59 ಪ್ರಕರಣಗಳು ದಾಖಲಾಗಿವೆ. ಸುಂದರಿ ವಿರುದ್ಧ ಉಡುಪಿ, ದ.ಕನ್ನಡದಲ್ಲಿ 3 ಕೇಸ್‌ಗಳು, ಜಯಣ್ಣ ಮೇಲೆ ಉಡುಪಿ, ಮಂಗಳೂರಿನಲ್ಲಿ 3 ಪ್ರಕರಣಗಳಿವೆ, ವನಜಾಕ್ಷಿ ವಿರುದ್ಧ15 ಕೇಸ್‌ ದಾಖಲಾಗಿವೆ. ಕೆ.ವಸಂತ ಮತ್ತು ಟಿ.ಎನ್. ಜೀಶಾ ವಿರುದ್ಧ ಹಲವು ಕೇಸ್‌ಗಳಿವೆ. ಮುಂಡಗಾರು ಲತಾ ಶೃಂಗೇರಿಯ ಜೆ.ಸಿ.ಬಿ.ಎಂ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಬಳಿಕ ಪಿಯುಸಿ ವ್ಯಾಸಂಗ ಅರ್ಧಕ್ಕೆ ಮೊಟಕುಗೂಳಿಸಿದ್ದಾಳೆ. ಕುದುರೆಮುಖ ವಿಮೋಚನಾ ಚಳವಳಿ ಮುಖಾಂತರ ನಕ್ಸಲ್ ಹೋರಾಟದಲ್ಲಿ ಸಕ್ರಿಯರಾಗಿದ್ದರು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಉಳಿಸಿ ವಿರೋಧಿ ಹೋರಾಟ ಸಮಿತಿಯ ನಾಯಕಿಯಾಗಿದ್ದಳು.

ಸುಂದರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುತ್ಲೂರಿನ ನಿವಾಸಿಯಾಗಿದ್ದು, ಸುಂದರಿಯ ಸಹೋದರ ವಸಂತ ಅಲಿಯಾಸ್ ಆನಂದ್ ಕೂಡ ನಕ್ಸಲ್ ಆಗಿದ್ದ. ಸಹೋದರನ ಹಿಂದೆಯೇ ಸುಂದರಿ ಕೂಡ ನಕ್ಸಲ್ ಚಟುವಟಿಕೆಗೆ ಎಂಟ್ರಿಯಾಗಿದ್ದಳು. 2010ರ ಎನ್‌ಕೌಂಟರ್‌ನಲ್ಲಿ ಆನಂದ್ ಹತ್ಯೆಯಾಗಿದ್ದ. ಸದ್ಯ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಾಯಕಿ ಸುಂದರಿ ಇದ್ದಾಳೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top