ಪುತ್ತೂರು : ಜಮ್ಮು ಹಾಗೂ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಗುಂಡಿನ ದಾಳ ನಡೆಸಿದ್ದು, ಓರ್ವ ಕಾಶ್ಮೀರಿ ಪಂಡಿತ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಂಯಯ್ ಶರ್ಮಾ (40) ಮೃತಪಟ್ಟಿವರೆಂದು ಗುರುತಿಸಲಾಗಿದೆ. ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದ ಸಂದರ್ಭ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ನೃತದೃಷ್ಟ ಸಂಜಯ್ ಶರ್ಮಾ ಅವರು ಗುಂಡಿಗೆ ತುತ್ತಾಗಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ.
ಸಂಜಯ್ ಶರ್ಮಾ ಅವರು ಜಮ್ಮು ಕಾಶ್ಮೀರದ ಬ್ಯಾಂಕ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.