ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಸಮುದ್ರದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದು ನೀರಿಗೆ ಇಳಿದ ಮೂವರು ನೀರು ಪಾಲಾದ ಘಟನೆ ಇಂದು ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ುಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು.
ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಹೊರಟು ಇಂದು ಮಧ್ಯಾಹ್ನ 12.30 ಕ್ಕೆ ಹೊಸಬೆಟ್ಟು ಬಳಿ ಇರುವ ಬೀಚ್ ಗೆ ಪ್ರವಾಸ ನಿಟ್ಟಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭ ಈಜಾಡಲು ನೀರಿಗೆ ಇಳಿದಿದ್ದು ಮೂವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಮೂವರ ಪೈಕಿ ಶಿವಕುಮಾರ್ ಮತ್ತು ಸತ್ಯವೇಲು ಎಂಬವರ ಮೃತದೇಹ ದೊರಕಿದ್ದು, ಮಂಜುನಾಥ ಅವರ ಮೃತದೇಹದ ಪತ್ತೆಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.
ಮೂವರು ಬೆಂಗಳೂರಿನ ಎಎಂಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.