ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ

ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಅಕ್ರಮ ಪ್ರಜೆ

ಮಂಗಳೂರು: ಸುರತ್ಕಲ್‌ ಸಮೀಪ ಮುಕ್ಕದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ಅನರುಲ್ ಶೇಖ್​ (25) ಸೆರೆಯಾದವ.
ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದ. ಬಳಿಕ ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದ. ಇಲ್ಲಿಂದ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.
ಅನರುಲ್​ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಉಡುಪಿ ಪೊಲೀಸರು 9 ಮಂದಿ ಬಾಂಗ್ಲಾದೇಶ​ ಪ್ರಜೆಗಳನ್ನುಬಂಧಿಸಿದ್ದರು. ಇವರು ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top