ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್ ಗೆ ತಡೆರಹಿತ ಬಸ್ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಗಾಯಗೊಂಡವರನ್ನು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರಂಗ ರಾವ್ ಎನ್ನಲಾಗಿದೆ.
ಗಾಯಾಳು ಪಾಂಡುರಂಗ ರಾವ್ ತಮ್ಮ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವೇಳೆ ಉಡುಪಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದ ತಡೆರಹಿತ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತದಿಂದಾಗಿ ಪಾಂಡುರಂಗ ರಾವ್ ಅವರ ತಲೆಗೆ ಹಾಗೂ ಕಾಲಿಗೆ ಜೋರಾಗಿ ಪೆಟ್ಟಾಗಿದ್ದು ಅಪಘಾತದ ಭೀಕರ ದೃಶ್ಯ ಸ್ಥಳೀಯ ಅಂಗಡಿ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.