ಪುತ್ತೂರು : ಅರ್ಚಕರೊಬ್ಬರು ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಗಾಯಗೊಂಡ ಅರ್ಚಕರೊರ್ವರ ನೆರವಿಗೆ ದಾವಿಸಿದ್ದು ಸಮೀಪದ ಮಸೀದಿಯಲ್ಲಿರುವವರೆನ್ನಲಾಗಿದೆ. ಅರ್ಚಕರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ.
ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು.
ಬೈಕ್‍ನಿಂದ ಬಿದ್ದಿದರಿಂದ ಕಾಲಿಗೆ ಗಾಯವಾಗಿ, ರಕ್ತಸ್ರಾವವಾಗಿತ್ತು, ಈ ಹಿನ್ನಲೆ ಮಸೀದಿಯಲ್ಲಿದ್ದವರು ಅರ್ಚಕರನ್ನ್ನು ಉಪಚರಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ರಿಕ್ಷಾ ಚಾಲಕ ಬಶೀರ್ ಕಡ್ತಿಮಾರ್ ಗಾಯಾಳುವನ್ನು ಚಿಕಿತ್ಸೆಗೆಂದು ಸ್ಥಳೀಯ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿದ್ದಾರೆ.
ಚಿಕಿತ್ಸೆ ಪಡೆದ ಬಳಿಕ ಮಸೀದಿಗೆ ಮರಳಿದ ಅರ್ಚಕರು ಸುಮಾರು 2 ಗಂಟೆ ತಾಸು ಮಸೀದಿಯಲ್ಲೇ ವಿಶ್ರಾಂತಿಯನ್ನು ಪಡೆದಿದ್ದಾರೆ.
ನಂತರ ಈಶ್ವರಮಂಗಲದ ಸಂದೀಪ್ ಕಾರಂತ ಎಂಬುವರು ಬಂದು ರಘುರಾಮ ಭಟ್ ಅವರನ್ನು ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋದರು ಎಂದು ಮೂಲಗಳು ತಿಳಿಸಿವೆ.