ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ ಕೃಷಿ ಮೇಳದ ಅಂಗವಾಗಿ ಬೃಹತ್ ಕೃಷಿ ಮೇಳಕ್ಕೆ ಶನಿವಾರ ಕಾಣಿಯೂರು ರಾಮತೀರ್ಥಮಠದ ಜಾತ್ರಾ ಮೈದಾನದಲ್ಲಿ ಚಾಲನೆ ನೀಡಲಾಯಿತು.
ದ.ಕ.ಜಿಲ್ಲಾ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕೃಷಿಮೇಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ನುಡಿದಿದ್ದಾರೆ.
ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಮನ್ಮಥ ಎಸ್.ಎನ್., ಕುಶಾಲಪ್ಪ ಗೌಡ ಪೂವಾಜೆ, ಚಾರ್ವಾಕ ಕೃಷಿಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಆನಂದ ಗೌಡ ಮೇಲ್ಮನೆ, ಧಮೇಂದ್ರ ಕಟ್ಟತ್ತಾರು, ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ಚಾರ್ವಾಕ ಹಾಲುತ್ಪಾದಕರ ಸಹಕಾರ ಸಂಘ ನಿಕಟಪೂರ್ವ ಅಧ್ಯಕ್ಷ ಧನಂಜಯ ಕೇನಾಜೆ, ಚಾರ್ವಾಕ ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಆರ್.ಗೌಡ ಅರುವಗುತ್ತು, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು, ನೋಟರಿ ನ್ಯಾಯವಾದಿ ಶಿವಪ್ರಸಾದ್ ಇ., ಕಾಣಿಯೂರು ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಆಡಳಿತ ಮೊಕ್ತೇಸರ ರೋಹಿತ್ ಗೌಡ ಅನಿಲ ಪಾಲ್ಗೊಂಡಿದ್ದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ ಗೌಡ ಪಿ. ಉಪಸ್ಥಿತರಿದ್ದರು.
ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಎಸ್.ವಸಂತ ವೀರಮಂಗಲ ಕಾರ್ಯಕ್ರಮ ನಿರೂಪಿಸಿದರು.