ಪುತ್ತೂರು: ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಗಮನ ಜತೆಗೆ ಆದ್ಯತೆ ನೀಡಬೇಕು. ಕಲಿಕೆಯಲ್ಲಿ ಹಿಂದೆ ಬೀಳಬೇಡಿ. ಕೆಟ್ಟ ಚಟಗಳಿಗೆ ಬಲಿ ಬೀಳಬೇಡಿ. ರಾಜಕೀಯ ವ್ಯಕ್ತಿಯ ಮಾತಿಗೆ ಕಿವಿ ಕೊಡಬೇಡಿ. ಯಾರೊಂದಿಗೆ ಮಾತನಾಡುವಲ್ಲಿ ಹಿಂಜರಿಕೆ ಬಿಡಬೇಕು. ಹಿಂಜರಿಕೆ ಬಿಟ್ಟು ಮಾತನಾಡಲು ಕಲಿಯಬೇಕು. ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದನೆಗಳನ್ನು ನೀಡುವ ಕೆಲಸ ಮಾಡುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಮಕ್ಕಳ ಮಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಬಂಟರ ಭವನದಲ್ಲಿ ಶನಿವಾರ ನಡೆದ ಮಕ್ಕಳ ಹಕ್ಕುಗಳ ಅರಿವು, ಮಕ್ಕಳ ಮಾಸೋತ್ಸವದ ಅಂಗವಾಗಿ ಮಕ್ಕಳೊಂದಿಗೆ ಸಂವಾದದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿಮಕ್ಕಳ ಹಕ್ಕುಗಳ ಭಿತ್ತಿಪತ್ರ ಹಾಗೂ ಕ್ಯಾಲೆಂಡರನ್ನು ಶಾಸಕರು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು. ಸಂವಾದದಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಸರಿಯಾದ ಸಮಯಕ್ಕೆ ಬಾರದ ಬಸ್, ವಾಹನ ದಟ್ಟಣಿಯಿಂದ ಶಾಲಾ ಬಳಿ ರಸ್ತೆ ದಾಟಲು ಸಮಸ್ಯೆ, ಕಂಪ್ಯೂಟರ್ ವ್ಯವಸ್ಥೆ ಒದಗಿಸಬೇಕು ಮುಂತಾದ ಹತ್ತು ಹಲವಾರು ಸಮಸ್ಯೆಗಳ ಸುರಿಮಳೆಗೈದರು.
ವೇದಿಕೆಯಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಶಿಕ್ಷಣ ಸಂಯೋಜಕ ಹರಿಪ್ರಸಾದ್, ದಯಾನಂದ ಮನವಳಿಕೆ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷ ಮಹಮ್ಮದ್ ರಫೀಕ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಪ್ರೇಮಲತಾ ರಾವ್, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷೆ ವೇದಾವತಿ ಎ., ದ.ಕ.ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ಕಮಲ ಗೌಡ, ಕಾರ್ಯದರ್ಶಿ ನಯನಾ ರೈ ಉಪಸ್ಥಿತರಿದ್ದರು.
ಮಂಗಳೂರು ಪಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆನ್ನು ಡಿ’ಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು.