ಮಂಗಳೂರು: ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕಡಿದು ಕ್ರೌರ್ಯ ಮೆರೆದವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಲಿದೆ.
ಈ ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ರವಿಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಜಿಲ್ಲೆಯ ಶಾಸಕರುಗಳು ಭಾಗವಹಿಸಲಿದ್ದಾರೆ.
ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತಾಂದರರ ವಿರುದ್ಧ ಪ್ರತಿಭಟಿಸುವಂತೆ ಪ್ರಕಟಣೆ ತಿಳಿಸಿದೆ.