6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು

ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6.80 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶ ಮಾಡಿದ್ದಾರೆ. ಮೂಲ್ಕಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ನಿನ್ನೆ ನಾಶ ಮಾಡಲಾಗಿದೆ.

ನ್ಯಾಯಾಲಯದ ಅನುಮತಿಯೊಂದಿಗೆ 2024 ಮತ್ತು 2023ರಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಇದು ಪ್ರತಿ ವರ್ಷದ ಪ್ರಕ್ರಿಯೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

37 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಸುಮಾರು 335 ಕೆಜಿ ಗಾಂಜಾ, 6.5 ಕೆಜಿ ಎಂಡಿಎಂಎ ಮತ್ತು 16 ಗ್ರಾಂ ಕೊಕೇನ್ ವಿಲೇವಾರಿ ಮಾಡಿದ್ದು, ಇದರ ಮೌಲ್ಯ ಸುಮಾರು 6.80 ಕೋಟಿ ರೂ. ಎಂದು ಅವರು ತಿಳಿಸಿದ್ದಾರೆ. ಡ್ರ ಸಂಬಂಧಿಸಿದಂತೆ ಕಳೆದ ವರ್ಷ ಮಂಗಳೂರು ವ್ಯಾಪ್ತಿಯಲ್ಲಿ 1000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top