ಬೈಕ್‍ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬಾಲಕ | ಸ್ಥಳದಲ್ಲೆ ಮೃತ್ಯು

ಕಡಬ : ಬೈಕ್ ಸವಾರನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ.

ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎನ್ನಲಾಗಿದೆ.

ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ  ಗಂಭೀರ ಗಾಯಗೊಂಡಿದ್ದರಿಂದ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.  ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top