ಸುಳ್ಯ: ಪತಿಯು ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಜ.I7ರ ತಡ ರಾತ್ರಿ ಸುಳ್ಯ ತಾಲೂಕಿನ ದೊಡ್ಡ ತೋಟ ಸಮೀಪದ ನೆಲ್ಲೂರು ಕೆಮ್ರಾಜಿ ಗ್ರಾಮದ ಕೊಡಿಮಜಲು ಎಂಬಲ್ಲಿ ನಡೆದಿದೆ.
ನೆಲ್ಲೂರು ಕೆಮ್ರಾಜಿ ಗ್ರಾಮದ ಕೋಡಿಮಜಲು ರಾಮಚಂದ್ರ ಕೊಲೆ ಆರೋಪಿ. ಆತನ ಪತ್ನಿ ವಿನೋದ ಹತ್ಯೆಯಾದವರು. ರಾಮಚಂದ್ರ ಪತ್ನಿಯನ್ನು ಕೋವಿಯಿಂದ ಗುಂಡಿಕ್ಕಿ ಕೊಂದು ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ಕೌಟುಂಬಿಕ ಕಲಹವೇ ಕೃತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಮದ್ಯ ಸೇವಿಸಿ ಬಂದು 10 ಗಂಟೆಯ ನಂತರ ಪತ್ನಿ ವಿನೋದ ಹಾಗೂ ಪುತ್ರ ಪ್ರಶಾಂತರೊಡನೆ ರಾಮಚಂದ್ರ ಗೌಡರು ಜಗಳ ಆರಂಭಿಸಿದ್ದಾರೆ. ಈ ರೀತಿ ಜಗಳವಾಡುವುದನ್ನು ಹಿರಿಮಗ ಪ್ರಶಾಂತ್ ವಿರೋಧಿಸಿದ್ದಾನೆ. ಆಗ ರಾಮಚಂದ್ರ ಗೌಡರು ಮನೆಯಲ್ಲಿದ್ದ ಕೋವಿ ಎತ್ತಿಕೊಂಡು ಮಗನಿಗೆ ಗುಂಡಿಕ್ಕಲು ಬಂದಿದ್ದಾರೆ. ಇದನ್ನು ಕಂಡ ಪತ್ನಿ ವಿನೋದರವರು ಅಡ್ಡ ಬಂದು ಗಂಡನನ್ನು ಕಡೆಯಲು ಪ್ರಯತ್ನಿಸಿದಾಗ ರಾಮಚಂದ್ರ ಗೌಡರು ಹಾರಿಸಿದ ಗುಂಡು ವಿನೋದ ಅವರಿಗೆ ತಾಗಿ ಮೃತಪಟ್ಟಿದ್ದಾರೆ. ಬಳಿಕ ರಾಮಚಂದ್ರ ಗೌಡರು ಯಾವುದೋ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ