ಇನ್ನೊವಾ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಮುಸುಕುಧಾರಿಗಳು
ಮೈಸೂರು : ಉಳ್ಳಾಲ ತಾಲೂಕಿನ ಕೋಟೆಕಾರಿನ ಬ್ಯಾಂಕ್ ದರೋಡೆ ಮತ್ತು ಬೀದರ್‌ನಲ್ಲಿ ಇಬ್ಬರನ್ನು ಸಾಯಿಸಿ ಎಟಿಎಂಗೆ ತುಂಬಿಸುವ ಹಣ ದರೋಡೆ ಮಾಡಿದ ಕೃತ್ಯಗಳು ಮರೆಯುವ ಮುನ್ನವೇ ರಾಜ್ಯದಲ್ಲಿ ಇದೇ ಮಾದರಿಯ ಇನ್ನೊಂದ ದರೋಡೆ ನಡೆದಿದೆ. ಮೈಸೂರಿನಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರು ಸಮೇತ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.
ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೊವಾ ಕಾರು, ಹಣ ಎಗರಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಎರಡು ಕಾರುಗಳಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿಗಳು ಉದ್ಯಮಿ ಸೂಫಿ ಅವರ ಕಾರು ಕಿತ್ತುಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಮೈಸೂರಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಉದ್ಯಮಿ ಸೂಫಿಯಿಂದ ಜಯಪುರ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.