ಬೆಂಕಿ ತಗುಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ವಿಟ್ಲ: ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡr ಪತ್ನಿ ಸುಶೀಲ (76) ಮೃತಪಟ್ಟವರು.

ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಕುರಿತು  ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top