ಪುತ್ತೂರು: ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಎಚ್.ಜಿ. ಅವರ ಚಪಡ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೊಪ್ಪಳದ ಶಿವಶಾಂತ ಮಂಗಳ ಭವನದಲ್ಲಿ ನಡೆದ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಡಾ ಶ್ರೀಧರ ಎಚ್ ಜಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದ ರಾಜ್, ಹಿರಿಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಮುಂತಾದವರು ಉಪಸ್ಥಿತರಿದ್ದರು