ವಿಟ್ಲ: ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ವಿಟ್ಲ – ಸಾಲೆತ್ತೂರು ಮಾರ್ಗ ಸಮೀಪವಿರುವ ವಿಟ್ಲದ ಸೈಂಟ್ ರೀಟಾ ವಿದ್ಯಾಸಂಸ್ಥೆಯ ರಸ್ತೆಯ ಬಳಿ ನಡೆದಿದೆ.
ದ್ವಿಚಕ್ರ ವಾಹನ ಸಾಲೆತ್ತೂರು ಕಡೆಯಿಂದ ವಿಟ್ಲ ಕಡೆಗೆ ಸಂಚರಿಸುತ್ತಿದ್ದು, ರಿಕ್ಷಾ ವಿಟ್ಲದಿಂದ ಕುಡ್ತ ಮುಗೇರು ಕಡೆಗೆ ಬರುತ್ತಿತ್ತು ಎನ್ನಲಾಗಿದೆ. ಘಟನೆಯ ಪರಿಣಾಮ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಚಾಲಕನಿಗೂ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ರಿಕ್ಷಾ ಮತ್ತೊಂದು ರಿಕ್ಷಾಗೂ ಗುದ್ದಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದಾರೆ.