ಪ್ರಯಾಗ್ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ ಜ. 25ರಂದು ಬೆಳಗ್ಗೆ 10ಗಂಟೆಗೆ ನಡೆಯಿತು.
ಮಹಾಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಗೋರಖ್ ಪುರದ ಗೋರಕ್ಷಾ ಮಠದ ಮಹಂತ ಯೋಗಿ ಆದಿತ್ಯ ನಾಥ್ ಜಿರವರು ಸಾನಿಧ್ಯವನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.