ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ : ಪ್ರಧಾನಿ ಮೋದಿ ಶುಭಾಶಯ

ಹೊಸದಿಲ್ಲಿ: ದೇಶಾದ್ಯಂತ 76ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ದೇಶದ ಎಲ್ಲ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

ಇಂದು ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲ ಜನತೆಗೂ ತಲೆಬಾಗಿ ನಮಸ್ಕರಿಸುತ್ತೇನೆ. ಈ ಗಣರಾಜ್ಯೋತ್ಸವ ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ, ಬಲಿಷ್ಠ ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ ಎಂದು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದೆ ರಾಜ್​ಪಥ್​) ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಛ ಇರಿಸಿದ ನಂತರ ದ್ರೌಪದಿ ಮುರ್ಮು ಅವರುಪ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ. ಈ ವರ್ಷ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top