ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ( ರಿ) ಇದರ ಅಧ್ಯಕ್ಷರಾಗಿ ಪುತ್ತೂರು ಪರ್ಲಡ್ಕ ನಿವಾಸಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ.
ಪುತ್ತೂರು ಬೋಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷರಾಗಿರುವ ಇವರು ಹಲವಾರು ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದು, ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರಶಾಂತ್ ಪೈ, ಪವಿತ್ರಪಾಣಿ ಪವಿತ್ರಪಾಣಿ ಸೂರ್ಯ ನಾರಾಯಣ ಕುದ್ದಣ್ಣಾಯ, ಉಪಾಧ್ಯಕ್ಷ ನಾರಾಯಣ ಗೌಡ, ಕೋಶಾಧಿಕಾರಿ ಸೇಸಪ್ಪ ಸಾಲ್ಯಾನ್, ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಹಾಗು ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.