ಪುತ್ತೂರು : ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ಧರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಸೋಮವಾರ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬೆಕ್ಕೊಂದು ಬಿದ್ದಿತ್ತು. ಮಂಗಳವಾರ ಬೆಕ್ಕಿನ ರಕ್ಷಣೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿದ್ದರು. ಬೆಕ್ಕನ್ನ ಹಿಡಿಯಲು ಬಾವಿಯೊಳಗಡೆ ಸಿದ್ಧರೂಢ ಮತ್ತು ಮೌನೇಶ್ ಎಂಬವರು ಇಳಿದಿದ್ದರು. ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಕೊಂಡಿತ್ತು.
ಬೆಕ್ಕನ್ನ ಹಿಡಿಯಲು ಪ್ರಯತ್ನಿಸಿದಾಗ ಏಕಾಏಕಿ ಬೆಕ್ಕು ಅಗ್ನಿಶಾಮಕದಳದ ಇಬ್ಬರ ಮೇಲೆ ಎರಗಿ ಗಂಭೀರ ಗಾಯಗೊಳಿಸಿದೆ ಸುಮಾರು ಏಳು ನಿಮಿಷಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿಯ ಕೈಯನ್ನ ಬೆಕ್ಕು ಕಚ್ಚಿ ಹಿಡಿದಿತ್ತು. ಪರಿಣಾಮ ಬೆಕ್ಕು ಕಚ್ಚಿದ ರೋಷಕ್ಕೆ ಬಾವಿಯೊಳಗಡೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಗಾಯಾಳುಗಳು ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.