ಪುತ್ತೂರು: ಸರಕಾರಿ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.
ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾರ್ಚ್ 1ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಮುಂದೂಡಲಾದ ಪರೀಕ್ಷೆಗಳ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಲಾಗಿದೆ.