ಗುರುವಾಯನ ಕೆರೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಮಹಾಭಾರತ ಸರಣಿಯ 63ನೇ ಕಾರ್ಯಕ್ರಮವಾಗಿ ತಾಮ್ರಧ್ವಜ ಕಾಳಗ ತಾಳಮದ್ದಳೆ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ಮಯೂರಧ್ವಜ),ಶಿವಾನಂದ ಭಂಡಾರಿ (ನಾರದ ),ಹರೀಶ ಆಚಾರ್ಯ ಬಾರ್ಯ (ತಾಮ್ರಧ್ವಜ ), ದಿವಾಕರ ಆಚಾರ್ಯ ಗೇರುಕಟ್ಟೆ (ನಕುಲ ಧ್ವಜ ), ರಾಘವ ಮೆದಿನ (ಶ್ರೀಕೃಷ್ಣ ), ರಾಘವ. ಯಚ್ (ಅರ್ಜುನ ) ಭಾಗವಹಿಸಿದ್ದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ ಗೇರುಕಟ್ಟೆ ಸ್ವಾಗತಿಸಿ, ಉಪ್ಪಿನಂಗಡಿ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು. ದೇವಾಲಯದ ಆಡಳಿತ ಅಧಿಕಾರಿ ಮತ್ತು ಕಚೇರಿ ವ್ಯವಸ್ಥಾಪಕ ಗಿರೀಶ್ ಶೆಟ್ಟಿ ನಾಳ ಸಹಕರಿಸಿದರು.