ಮಂಗಳೂರು : ನಿಯಂತ್ರಣ ತಪ್ಪಿ ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುಕ್ಕ ಸಮೀಪ ನಡೆದಿದೆ.
ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಾರಿಯಡಿ ಬಿದ್ದಿದೆ.
ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಸ್ಕಾಂಗೆ ಸೇರಿದ ಲಾರಿ ಇದಾಗಿದ್ದು, ವಿದ್ಯುತ್ ಕಂಬಗಳನ್ನು ರವಾಣಿಸುತ್ತಿತ್ತು ಎನ್ನಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.