ಸರಕಾರಿ ನೌಕರರ ಮುಷ್ಕರ ವಾಪಾಸ್: ತಕ್ಷಣ ಕಚೇರಿಗೆ ಹಾಜರಾಗಲೂ ಸರ್ಕಾರಿ ನೌಕರರಿಗೆ ಸೂಚನೆ

ಬೆಂಗಳೂರು: ಸರ್ಕಾರಿ ನೌಕರರಿಗೆ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ತಕ್ಷಣವೇ ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸೂಚಿಸಿದ್ದಾರೆ.

ನೌಕರರ ಸಂಘದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶೇ. 17ರಷ್ಟು ವೇತನ ಹೆಚ್ಚಳ ಮಾಡಲು ಸೂಚಿಸಿದ್ದಾರೆ. ಈ ಬಗ್ಗೆ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರ ಕೈಬಿಡಲು ನಿರ್ಧಾರ ಮಾಡಿದೆ ಎಂದು ಅವರು ತಿಳಿಸಿದರು.

ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ ಎಂದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top