ಪುತ್ತೂರು: ನಮ್ಮ ಸಂಸ್ಕಾರ – ಸಂಸ್ಕೃತಿ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ಮತ್ತು ಮುಂದಿನ ಪರಂಪರೆಗೆ ಹಸ್ತಾಂತರಿಸುವ ಮಹಾತ್ಕಾರ್ಯ ವನ್ನು ಸ್ವಾಮೀಜಿಯವರ ಸಂಸ್ಮರಣ ಕಾರ್ಯಕ್ರಮದ ಮೂಲಕ ನಾವೆಲ್ಲರೂ ಮಾಡಬೇಕಾಗಿದೆ. ಸಮಾಜದ ಬೆಳವಣಿಗೆಯಲ್ಲಿ, ಸಂಘಟಾನಾತ್ಮಕವಾಗಿ ಮುಂದುವರಿಯಲು ಇಂತಹ ಕಾರ್ಯಕ್ರಮ ಅವಶ್ಯಕ ಮತ್ತು ಅನಿವಾರ್ಯ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಜ. 22ರಂದು ಪುತ್ತೂರಿನಲ್ಲಿ ನಡೆಯಲಿರುವ ಬೈರವೈಕ್ಯರಾಗಿರುವ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಲುವಾಗಿ ಕೊಳ್ತಿಗೆ ಗ್ರಾಮದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ಬಗ್ಗೆ ಮಾರ್ಗದರ್ಶನ ನೀಡಿದರು.