ಉಪ್ಪಿನಂಗಡಿ: ಬಿಜೆಪಿ ಉಪ್ಪಿನಂಗಡಿ ಹಾಗೂ ಕಣಿಯೂರು ಮಹಾಶಕ್ತಿ ಕೇಂದ್ರದ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ ಫೆ.17 ಸೋಮವಾರ ನಡೆಯಲಿದೆ.
ಬೆಳಿಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಅಭಿವೃದ್ಧಿ ಕುರಿತು ಇತಿಹಾಸದಲ್ಲೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ, ಸ್ವಯಂ ಪ್ರೇರಿತರಾಗಿ 50 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಲ್ಲಿಸಿದ ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಪಾಲ್ಗೊಳ್ಳಲಿದ್ದಾರೆ.
ಪಕ್ಷ ಹಾಗೂ ಸಂಘಟನೆಯ ದೇವದುರ್ಲಭ ಕಾರ್ಯಕರ್ತರ ಆಶಯದಂತೆ ನಡೆಯುವ ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಣಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಅತ್ರಮಜಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.