ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಜನ ಮನೆ ಮಠ ಕಳೆದುಕೊಂಡು ಬೀದಿಗೆ ಭೀಳುವ, ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳ ಬಗ್ಗೆ ರಾಜ್ಯ ಸರಕಾರ ತೆಗೆದುಕೊಂಡ ಮಹತ್ವದ ನಿರ್ಣಯಗಳಂತೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ ೨೦೨೫ ರ ಮುಖ್ಯಾಂಶಗಳು:-

೧. ಸದರಿ ಆಧ್ಯಾದೇಶವು ದಿನಾಂಕ: ೧೨.೦೨.೨೦೨೫ ರಂದು ಜಾರಿಗೆ ಬಂದಿದೆ.

































 
 

೨. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.

೩. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.

೪. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.

೫. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.

೬. ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿAದ ಅಂದಾಜು ರೂ. ೬೦,೦೦೦ ಕೋಟಿ ಸಾಲವನ್ನು ಸುಮಾರು ೧.೦೯ ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿAದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. ೪೦,೦೦೦ ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.

೭. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.

೮. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, ೬ ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.೧೦,೦೦೦/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.

೯. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.

೧೦. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.

೧೧. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು ೧೦ ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. ೫ ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (ಅogಟಿizಚಿbಟe / ಓoಟಿ ಃಚಿiಟಚಿbಟe) ಆಗಿರುತ್ತವೆ. ಯಾವುದೇ ಪೋಲೀಸ್ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.

೧೨. ಪೋಲೀಸ್ ಉಪ ಅಧೀಕ್ಷಕರ (ಆಥಿ SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suo moಣo) ಪ್ರಕರಣವನ್ನು ದಾಖಲಿಸಬಹುದು.

೧೩. ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

೧೪. ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top