ಪುತ್ತೂರು: ಮಾಜಿ ಪ್ರಧಾನಿ ವಾಜಪೇಯಿ ಜನ್ಮಶತಾಬ್ದಿ ವರ್ಷಚಾರಣೆ ಸಂದರ್ಭ ವಾಜಪೇಯಿ ಜತೆ ಸಂಪರ್ಕ ಇರಿಸಿಕೊಂಡ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಹಿರಿಯ ಬಿಜೆಪಿ ಮುಖಂಡ ಸುರೇಶ್ ಆಳ್ವ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಹಿರಿಯರಾದ ಬಾಲಕೃಷ್ಣ ರೈ ಮುಗೆರೋಡಿ, ಚಣಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ ನಿತೀಶ್ ಕುಮಾರ್ ಶಾಂತಿವನ, ಯುವರಾಜ್ ಪೆರಿಯತ್ತೋಡಿ, ಪುರುಷೋತ್ತಮ ಮುಂಗ್ಲಿಮನೆ ಮತ್ತಿತರರು ಉಪಸ್ಥಿತರಿದ್ದರು.