ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನಕ್ಕೆ ತೆರಳುತ್ತಿದ್ದ ಬೆಳಗಾವಿಯ ಗೋಕಾಕ್ ನಗರದ 7 ಮಂದಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮಧ್ಯ ಪ್ರದೇಶದ ಜಬಲಪುರ ಪೆಹರಾ ಟೋಲ್ ನಾಕಾ ಬಳಿ ಇಂದು ಬೆಳಗಿನ ಜಾವ ಕ್ರೂಸರ್ ವಾಹನ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. 7 ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಎರಡು ದಿನಗಳ ಹಿಂದೆ ಗೋಕಾಕ್ ನಗರದಿಂದ 10 ಮಂದಿ ಕ್ರೂಸರ್‌ನಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದರು. ಇಂದು ಮುಂಜಾನೆ ಮಧ್ಯಪ್ರದೇಶ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.