ಪುತ್ತೂರು: ಕಾರು ಹಾಗೂ ಆ್ಯಕ್ಟಿವಾ ಡಿಕ್ಕಿ ಹೊಡೆದುಕೊಂಡ ಪರಿಣಾಮ ಆ್ಯಕ್ಟಿವಾ ಸವಾರ ಮೃತಪಟ್ಟ ಘಟನೆ ಇಂದು ಕಬಕದಲ್ಲಿ ನಡೆದಿದೆ.
ಕುಂಡಡ್ಕ ಕಂಪ ನಿವಾಸಿ ಜನಾರ್ದನ ಪೂಜಾರಿ (40) ಮೃತಪಟ್ಟ ಆ್ಯಕ್ಟಿವಾ ಸವಾರ.
ಕಬಕದಿಂದ ವಿದ್ಯಾಪುರಕ್ಕೆ ಹೋಗುತ್ತಿರುವ ಆಕ್ಟಿವಾ ಮತ್ತು ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತೀವ್ರ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ ಪೂಜಾರಿಯವರು ಇಡ್ತಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.