ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ ಉತ್ಸವ ‘ರಜತ ಪಥ’ ಫೆ.26 ಬುಧವಾರ ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ 6.30 ರಿಂದ ಸಂಜೆ 6.30 ರ ತನಕ ಅರ್ಧ ಏಕಾಹ ಭಜನೆ, ಬೆಳಿಗ್ಗೆ 7.30 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಏಕಾದಶ ರುದ್ರಾಭಿಷೇಕ, ಶ್ರೀ ಪಂಚಲಿಂಗೇಶ್ವರ ದೇವರಿಗೆ ರಜತ ಕವಚ ಸಮರ್ಪಣೆ, ಶ್ರೀ ರುದ್ರಯಾಗದ ಪ್ರಾರಂಭ, ಮಧ್ಯಾಹ್ನ 12.30 ಕ್ಕೆ ರುದ್ರ ಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ.
ಸಂಜೆ 6.30 ರಿಂದ 8 ರ ತನಕ ಕುಣಿತ ಭಜನೆ, ರಾತ್ರಿ 8 ರಿಂದ ಧಾರ್ಮಿಕ ಸಭಾ ಕಾರ್ಯಕ್ರ, 9.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಉಪಾಹಾರ ನಡೆಯಲಿದೆ ಎಂದು ಶ್ರೀ ದೇವಸ್ಥಾನದ ಪ್ರಕಟಣೆ ತಿಳಿಸಿದೆ.