ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು.

ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ ನಡೆಯಿತು. ವಿಶೇಷವಾಗಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮೂರ್ತಿಗೆ ಭಕ್ತಾದಿಗಳಿಂದ ಬಿಲ್ವಾರ್ಚನೆ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು.

ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಮಹಾಶಿವರಾತ್ರಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.